
ನಾವು ಭಿಕ್ಷೆ ಬೇಡುವಂತಹ ಪರಿಸ್ಥಿತಿಗೆ ಬಂದಿದ್ದೇವೆ: Vinod Prabhakar
ವಿನೋದ್ ಪ್ರಭಾಕರ್ (Vinod Prabhakar) ಅಭಿನಯದ ‘ಮಾದೇವ’ ಚಿತ್ರ ಕಳೆದ ವಾರ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಮೆಚ್ಚುಗೆ ಕೇಳಿಬಂದಿದೆ. ಆದರೆ, ಕಲೆಕ್ಷನ್ ಇಲ್ಲ ಎಂಬ ಕಾರಣಕ್ಕೆ ಹಲವು ಮಲ್ಟಿಪ್ಲೆಕ್ಸ್‌ಗಳಿಂದ ಚಿತ್ರವನ್ನು ಎತ್ತಂಗಡಿ ಮಾಡಲಾಗಿದೆ. ಕೆಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ಚಿತ್ರವಿದ್ದರೂ, ಸರಿಯಾದ ಪ್ರದರ್ಶನ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಪ್ರಭಾಕರ್ ಮತ್ತು ಚಿತ್ರತಂಡದವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ದೂರು ಸಲ್ಲಿಸಿದ್ದಾರೆ. ನಂತರ ಮಾತನಾಡಿರುವ ವಿನೋದ್ ಪ್ರಭಾಕರ್, ‘ಒಂದಿಷ್ಟು ಮಲ್ಟಿಪ್ಲೆಕ್ಸ್‌ಗಳಲ್ಲಿ ಕಳೆದ ವಾರ ಎರಡು ಪ್ರದರ್ಶನ ಕೊಡಲಾಗಿತ್ತು. ಪ್ರದರ್ಶನಗಳ…