
ಆಂಜನೇಯ ಅವತಾರವೆತ್ತಿದ ಗಣೇಶ್; ‘Yours Sincerely Raamʼ ಚಿತ್ರದ ಪೋಸ್ಟರ್ ಬಿಡುಗಡೆ
ಕನ್ನಡ ಚಿತ್ರರಂಗದ ತ್ಯಾಗರಾಜರು ಎಂದೇ ಖ್ಯಾತಿ ಪಡೆದಿರುವ ರಮೇಶ್ ಅರವಿಂದ್ ಹಾಗೂ ಗಣೇಶ್ ಜೊತೆಯಾಗಿ ನಟಿಸುತ್ತಿರುವ ‘Yours Sincerely Raamʼ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇಂದು ಗಣೇಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರತಂಡದವರು ಹೊಸ ಪೋಸ್ಟರ್ ಬಿಡುಗಡೆ ಮಾಡಿ ಗಣೇಶ್‍ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಗಣೇಶ್ ಜನ್ಮದಿನಕ್ಕೆ ಅನಾವರಣಗೊಂಡಿರುವ ಪೋಸ್ಟರ್‌ನಲ್ಲಿ ಗಣೇಶ್ ಹಿಂದೆಂದೂ ಕಾಣದ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಭಜರಂಗಿ ಅವತಾರದಲ್ಲಿ ಮಳೆ ಹುಡ್ಗ ದರ್ಶನ ಕೊಟ್ಟಿದ್ದಾರೆ. ಹಿಮಾಲಯದ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ…