ಕೊನೆಗೂ ‘The Rise Of Ashoka’ ಚಿತ್ರದ ಚಿತ್ರೀಕರಣ ಮುಕ್ತಾಯ

ಸತೀಶ್ ನೀನಾಸಂ ಹಾಗೂ ಸಪ್ತಮಿ ನಟನೆಯ ‘ದಿ ರೈಸ್ ಆಫ್ ಅಶೋಕ’ (The Rise Of Ashoka) ಚಿತ್ರದ ಚಿತ್ರೀಕರಣ ಕೊನೆಗೂ ಮುಕ್ತಾಯವಾಗಿದ್ದು, ಚಿತ್ರ ಇದೇ ವರ್ಷ ಬಿಡುಗಡೆಯಾಗುವ ಸಾಧ್ಯತೆ ಇದೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿದ್ದು, ಕೆಲಸಗಳು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆಯೇ ಬಿಡುಗಡೆ ದಿನಾಂಕವನ್‍ನು ಅಧಿಕೃತವಾಗಿ ಘೋಷಿಸಲಾಗುತ್ತದೆ.

‘ದಿ ರೈಸ್‍ ಆಫ್‍ ಅಶೋಕ’ ಚಿತ್ರವು ಮೂರು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ನಿರ್ದೇಶಕ ವಿನೋದ್‍ ದೋಂಢಾಳೆ ನಿಧನದಿಂದ ಹಲವು ದಿನಗಳ ಕಾಲ ಚಿತ್ರೀಕರಣ ಸ್ಥಗಿತಗೊಂಡಿತ್ತು. ಕೊನೆಗೆ ಚಿತ್ರತಂಡದವರ ಸಂಘಟಿತ ಪ್ರಯತ್ನದಿಂದ ಚಿತ್ರೀಕರಣ ಕೊನೆಗೂ ಮುಕ್ತಾಯವಾಗಿದೆ.

ಸತೀಶ್ ನೀನಾಸಂ ಈ ಚಿತ್ರದಲ್ಲಿ ಕ್ರಾಂತಿಕಾರಿ ಯುವಕನ ಪಾತ್ರ ಮಾಡಿದ್ದಾರೆ. 70ರ ದಶಕದಲ್ಲಿ ನಡೆಯುವ ಕಥೆಯು ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಕುರಿತು ಬೆಳಕು ಚೆಲ್ಲಲಿದೆ. ಸತೀಶ್‍ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ. ಸುರೇಶ್, ರವಿಶಂಕರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ಡ್ರಾಗನ್ ಮಂಜು ಮುಂತಾದವರು ನಟಿಸಿದ್ದಾರೆ.

‘ದಿ ರೈಸ್‍ ಆಫ್‍ ಅಶೋಕ’ ಚಿತ್ರಕ್ಕಾಗಿ ಶ್ರೀರಂಗಪಟ್ಟಣ, ನಂಜನಗೂಡು, ಗುಂಡ್ಲುಪೇಟೆ ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಈ ಚಿತ್ರ ಕನ್ನಡದ ಜೊತೆ ತೆಲುಗು ಹಾಗೂ ತಮಿಳು ಭಾಷೆಯ ಸಿನಿಮಾಗಳಲ್ಲೂ ಬಿಡುಗಡೆಯಾಗಲಿದೆ.

‘ದಿ ರೈಸ್ ಆಫ್ ಆಫ್ ಅಶೋಕ’ನಿಗೆ ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ, ಲವಿತ್ ಛಾಯಾಗ್ರಹಣ ಮತ್ತು ಮನು ಶೇಡ್ಗಾರ್ ಸಂಕಲನವಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್‍ನಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ನೀನಾಸಂ ಸತೀಶ್ ಕೂಡ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ:-


ಹೆಚ್ಚಿನ ಓದಿಗೆ:-

24 thoughts on “ಕೊನೆಗೂ ‘The Rise Of Ashoka’ ಚಿತ್ರದ ಚಿತ್ರೀಕರಣ ಮುಕ್ತಾಯ

Leave a Reply

Your email address will not be published. Required fields are marked *

ಸೀರೆಯಲ್ಲಿ ಫೋಟೊ ಶೂಟ್‌ ತೆಗಿಸಿಕೊಂಡ ಕಾಂತಾರ ಸುಂದರಿ ಸಪ್ತಮಿಗೌಡ Bigg Boss 11 Sangeetha Sringeri in a cute look ಪುನಃ ಪುನಃ ನೋಡಿದರು,,,,ಎಂದ ಹಾಗೆ ವಿಭಿನ್ನ Lookನಲ್ಲಿ ರಮೇಶ್‌ ಅರವಿಂದ್‌ ಶಿವರಾಜ್‍ಕುಮಾರ್ ಹೊಸ ಚಿತ್ರ ‘ಡ್ಯಾಡ್‍’; ಡಾಕ್ಟರ್ ಪಾತ್ರದಲ್ಲಿ ನಟನೆ ಸುಳ್ಳು ಸುದ್ದಿ ನಿಜವಾಗುವ ಕಾಲ ಬಂದೇ ಬಡ್ತಾ..!