ಮುಗಿಯಿತು `The Devil’ ಚಿತ್ರದ ಮಾತಿನ ಭಾಗದ ಚಿತ್ರೀಕರಣ …

ವಿದೇಶಕ್ಕೆ ಹೋಗಿ ಚಿತ್ರೀಕರಣ ಮಾಡುವುದಕ್ಕೆ ನ್ಯಾಯಾಲಯವು ದರ್ಶನ್‍ಗೆ ಕೆಲವೇ ದಿನಗಳ ಹಿಂದಷ್ಟೇ ಅನುಮತಿ ನೀಡಿದೆ. ಸದ್ಯದಲ್ಲೇ ದರ್ಶನ್ (Thoogudeepa Darshan) ವಿದೇಶಕ್ಕೆ ಹಾರಲಿದ್ದು, ‘ದಿ ಡೆವಿಲ್’ (The Devil) ಚಿತ್ರದ ಹಾಡುಗಳ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
ಈ ಮಧ್ಯೆ, ಚಿತ್ರತಂಡದಿಂದ ಸುದ್ದಿಯೊಂದು ಬಂದಿದ್ದು, ‘ದಿ ಡೆವಿಲ್’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆಯೇ ಶುರುವಾಗಿತ್ತು. ಆದರೆ, ಚಿತ್ರ ಯಾವ ಹಂತದಲ್ಲಿದೆ? ಎಷ್ಟು ಮುಗಿದಿದೆ? ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿರಲಿಲ್ಲ. ಇದೀಗ ಚಿತ್ರತಂಡವು ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ. ಇನ್ನು, ಹಾಡು ಮತ್ತು ಹೊಡೆದಾಟದ ಭಾಗದ ಚಿತ್ರೀಕರಣ ಮಾತ್ರ ಬಾಕಿ ಇದ್ದು, ಸದ್ಯದಲ್ಲೇ ಅದನ್ನೂ ಮುಗಿಸಿ, ಇದೇ ವರ್ಷ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ.
ಇದರ ಜೊತೆಗೆ ‘ದಿ ಡೆವಿಲ್’ ಚಿತ್ರತಂಡವು ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಪೋಸ್ಟರ್‍ನಲ್ಲಿ ದರ್ಶನ್, ‘ಅಂತ’ ಚಿತ್ರದ ಕನ್ವರ್ ಲಾಲ್ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದಾರೆ.
‘ದಿ ಡೆವಿಲ್’ ಚಿತ್ರವನ್ನು ಶ್ರೀಮಾತಾ ಕಂಬೈನ್ಸ್ ಬ್ಯಾನರ್ ಅಡಿ ಪ್ರಕಾಶ್ ವೀರ್ ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಸುಧಾಕರ್ ರಾಜ್ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಸಂಗೀತವಿದೆ. ಇನ್ನು, ಹಾಡು ಮತ್ತು ಹೊಡೆದಾಟದ ಭಾಗದ ಚಿತ್ರೀಕರಣ ಬಾಕಿ ಇದ್ದು, ಸದ್ಯದಲ್ಲೇ ಅದನ್ನೂ ಮುಗಿಸಿ, ಇದೇ ವರ್ಷ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ.
ಚಿತ್ರದಲ್ಲಿ ದರ್ಶನ್, ರಚನಾ ರೈ, ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ತುಳಸಿ, ಶ್ರೀನಿವಾಸಪ್ರಭು, ಶೋಭರಾಜ್ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಈಗಾಗಲೇ ಬೆಂಗಳೂರು, ಮೈಸೂರು, ರಾಜಸ್ತಾನ ಮುಂತಾದ ಕಡೆಗಳಲ್ಲಿ 60ಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ದುಬೈ ಮುಂತಾದ ಕಡೆಗಳಲ್ಲಿ ಹಾಡಿನ ಚಿತ್ರೀಕರಣ ನಡೆಯಲಿದೆ.

ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
[…] […]
[…] ಹಳೆಯ ‘ರಾಜದ್ರೋಹಿ’ ಹೊಸ ರೂಪದಲ್ಲಿ ಬಿಡುಗಡೆಗೆ ಸಜ್ಜು … […]
[…] […]
[…] 250 ದಿನಗಳ ಚಿತ್ರೀಕರಣದ ನಂತರ ‘Kantara Chapter 1’ ಸಂಪೂರ್ಣ […]
It is a pity, that I can not participate in discussion now. I do not own the necessary information. But…
2 thoughts on “ಮುಗಿಯಿತು `The Devil’ ಚಿತ್ರದ ಮಾತಿನ ಭಾಗದ ಚಿತ್ರೀಕರಣ …”