ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್ ಆಗಿ ಬಿಡುಗಡೆ

ತುಳು ಚಿತ್ರಗಳು ಕರಾವಳಿ ಅಲ್ಲದೆ ರಾಜ್ಯದ ಬೇರೆ ಭಾಗಗಳಲ್ಲಿ ನೇರವಾಗಿ ಬಿಡುಗಡೆ ಆಗುತ್ತಿದ್ದರೂ, ಯಾವೊಂದು ಚಿತ್ರವೂ ಕನ್ನಡಕ್ಕೆ ಡಬ್ ಆಗಿರಲಿಲ್ಲ. ಈಗ ‘ದಸ್ಕತ್’ (Daskath) ಎಂಬ ತುಳು ಚಿತ್ರ ಕರಾವಳಿ ಭಾಗದಲ್ಲಿ ಯಶಸ್ವಿಯಾಗಿ, ಈಗ ಕನ್ನಡದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.
‘ದಸ್ಕತ್’ ಚಿತ್ರವು ಮೇ 9ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಅನೀಶ್ ಪೂಜಾರಿ ವೇಣೂರು,‘ನಾನು 2015 ರ ಜೀ ಕಾಮಿಡಿ ರಿಯಾಲಿಟಿ ಶೋನಲ್ಲಿ ಬಂದಂತಹ ಪ್ರತಿಭೆ. ನನ್ನದೇ ಒಂದಷ್ಟು ಗೆಳೆಯರ ಬಳಗ ಸೇರಿಕೊಂಡು ಕಿರುಚಿತ್ರ ಹಾಗೂ ವೆಬ್ ಸೀರೀಸ್ ತಯಾರಿಸಿದ್ದೆವು. ತದನಂತರ ಚಿತ್ರ ಮಾಡಬೇಕೆಂಬ ಉದ್ದೇಶದಿಂದ ಈ ‘ದಸ್ಕತ್’ ಚಿತ್ರ ಮಾಡಿದೆವು’ ಎಂದರು.
ದಸ್ಕತ್ ಅಂದರೆ ಸಿಗ್ನೇಚರ್ ಅಥವಾ ಸಹಿ ಎಂದರ್ಥ. ‘ಒಂದು ಹಳ್ಳಿಯಲ್ಲಿ ಜನ ಸಹಿಗಾಗಿ ಎಷ್ಟು ಕಷ್ಟ ಪಡ್ತಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಒಂದು ಸಹಿಯಿಂದ ಏನೆಲ್ಲಾ ಅವಾಂತರ ಸೃಷ್ಟಿಯಾಗುತ್ತದೆ. ಶ್ರೀಮಂತರು, ಬಡವರು ಹಾಗೂ ಅಧಿಕಾರಿಗಳ ನಡುವಿನ ತಳಮಳದ ಜೊತೆಗೆ ಬದುಕು ಹೇಗೆಲ್ಲಾ ಸಾಗುತ್ತದೆ ಎಂಬುದನ್ನು ಬಹಳ ಸೂಕ್ಷ್ಮವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ಇಂತಹ ಘಟನೆಗಳು ಪ್ರತಿಯೊಬ್ಬರ ಬದುಕಿನಲ್ಲಿ ನಡೆಯುವಂತಹ ಸಾಧ್ಯತೆ ಇದ್ದೇ ಇರುತ್ತದೆ. ಕರಾವಳಿ ಭಾಗದ ಸುತ್ತ ಚಿತ್ರೀಕರಿಸಿರುವ ಈ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ 70 ದಿನವನ್ನು ಪೂರೈಸಿದೆ. ಹಾಗೆಯೇ ಕೆನಡಾ, ನೈಜೀರಿಯಾ, ದುಬೈ, ಮಸ್ಕತ್ ಸೇರದಂತೆ ಬಬೇರೆ ದೇಶಗಳಲ್ಲೂ ಚಿತ್ರ ಪ್ರದರ್ಶನವಾಗಿದೆ’ ಎಂದರು.
ಈ ಚಿತ್ರವನ್ನ ಕನ್ನಡದಲ್ಲಿ ಡಬ್ ಮಾಡಿ ಬಿಡುಗಡೆ ಮಾಡುತ್ತಿರುವುದು ಜಗದೀಶ್ ಎನ್. ಅರೇಬನ್ನಿಮಂಗಲ. ಈ ಚಿತ್ರದ ಕುರಿತು ಮಾತನಾಡುವ ಅವರು, ‘ನಾನು ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಗ್ರಾಮದ ಕಷ್ಟ ಸುಖಗಳನ್ನ ಚೆನ್ನಾಗಿ ತಿಳಿದುಕೊಂಡು ಪರಿಹಾರ ಕೂಡ ಮಾಡಿದ್ದೇನೆ. ಈ ಚಿತ್ರ ನೋಡಿದೆ. ನನಗೆ ತುಳು ಬರದಿದ್ದರೂ ಅದರ ಭಾವನೆಗಳು ತುಂಬಾ ಇಷ್ಟವಾಯಿತು. ಗ್ರಾ ಪಂ. ಅಧಿಕಾರಿಯಿಂದ ಆ ಹಳ್ಳಿಯ ಮುಗ್ಧ ಜನ ಹೇಗೆಲ್ಲಾ ಕಷ್ಟಪಡುತ್ತಿದ್ದಾರೆ ಎಂಬುವುದನ್ನು ಬಹಳ ಸೊಗಸಾಗಿ ತೋರಿಸಿದ್ದಾರೆ. ಹಾಗಾಗಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡಲು ಪ್ಲಾನ್ ಮಾಡಿ ಹೊರ ತರುತ್ತಿದ್ದೇವೆ’ ಎಂದರು.

‘ದಸ್ಕತ್’ ಚಿತ್ರವನ್ನು 77 ಸ್ಟುಡಿಯೋಸ್ ಅಡಿ ರಾಘವೇಂದ್ರ ಕುಡ್ವ ನಿರ್ಮಾಣ ಮಾಡಿದು, ಚಿತ್ರದಲ್ಲಿ ಮೋಹನ್ ಶೇಣಿ, ಭವ್ಯ ಪೂಜಾರಿ, ದೀಪಕ್ ರೈ ಪಾಣಾಜೆ ಸೇರಿದಂತೆ ಹಲವರು ನಟಿಸಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ಆಚಾರ್ಯ ಗುಂಪಲಾಜೆ ಛಾಯಾಗ್ರಹಣ, ಸಮರ್ಥನ್ ಎಸ್. ರಾವ್ ಸಂಗೀತ ಹಾಗೂ ಗಣೇಶ್ ನೀರ್ಚಾಲ್ ಸಂಕಲನವಿದೆ.
ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
[…] […]
[…] […]
[…] Yuddakanda box office collection; ಗಳಿಕೆ ಗೊತ್ತಿಲ್ಲ, ಒಳ್ಳೆಯ ಪ್ರಯತ್ನ ಗೆದ್ದಿದೆ ಎಂದ ಅಜೇಯ್ ರಾವ್ […]
[…] Yuva Rajkumar Ekka; ‘ಎಕ್ಕ’ದಲ್ಲಿ ಪುನೀತ್ ಅವರನ್ನು ನೆನಪಿಸಿದ ಯುವ ರಾಜಕುಮಾರ್ […]
[…] ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್ ಆಗಿ ಬಿಡುಗಡೆ […]
2 thoughts on “ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್ ಆಗಿ ಬಿಡುಗಡೆ”