‘ಸಾಲುಮರದ ತಿಮ್ಮಕ್ಕ’ನ ಪಾತ್ರದಲ್ಲಿ ನಟಿ Soujanya…

ಕರ್ನಾಟಕದಲ್ಲಿ ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ ಈಗ ಸಿನಿಮಾ ರೂಪದಲ್ಲಿ ಬರಲಿದೆ. ವೃಕ್ಷಗಳನ್ನೇ ಮಕ್ಕಳಾನ್ನಾಗಿ ಕಂಡು ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಪೋಷಿಸಿ ಇಡೀ ಜಗತ್ತಿಗೆ ಮಾದರಿಯಾಗಿರುವ ತಿಮ್ಮಕ್ಕನವರ ಕುರಿತ ಈ ಚಿತ್ರವನ್ನು ಶ್ರೀ ನಿರ್ದೇಶನ ಮಾಡುತ್ತಿದ್ದಾರೆ.

ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ಕುಮಾರ್ ಎಚ್.ಆರ್, ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ ಹಾಗೂ ಶ್ರೀ ನಿರ್ಮಾಣದ ಈ ಚಿತ್ರವು ಡಾ. ನೆಲ್ಲಿಕಟ್‍ಟೆ ಎಸ್. ಸಿದ್ದೇಶ್ ಅವರ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಕೃತಿಯನ್ನು ಆಧಾರಿಸಿದೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅನಾವರಣಗೊಳಿಸಿದ್ದಾರೆ.

ಈ ಹಿಂದೆ ‘ಒರಟ’ದಿಂದ ‘ಕೋರ’ ಚಿತ್ರದವರೆಗೂ ಹಲವು ಕಮರ್ಷಿಯಲ್‍ ಚಿತ್ರಗಳನ್ನು ನಿರ್ದೇಶಿಸಿರುವ ಮತ್ತು ‘ಒರಟ’ ಶ್ರೀ ಎಂದೇ ಜನಪ್ರಿಯರಾಗಿರುವ ಶ್ರೀ, ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟಿ ಸೌಜನ್ಯ,(Soujanya) ತಿಮ್ಮಕ್ಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ‌. ನೀನಾಸಂ ಅಶ್ವಥ್, ತಿಮ್ಮಕ್ಕನ ಗಂಡನ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಎಂ.ಕೆ ಸಮಠ, ಗಣೇಶ್ ಕೇಸರ್ಕರ್, ಭೂಮಿಕಾ, ಪ್ರಕಾಶ್ ಶೆಟ್ಟಿ, ಮನು ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಚಿತ್ರಕ್ಕಾಗಿ ಇತ್ತೀಚೆಗೆ ಚಿತ್ರೀಕರಣ ಪ್ರಾರಂಭವಾಗಿದೆ. ತುಮಕೂರು ಜಿಲ್ಲೆಯ ಹುಲಿಕಲ್ ಹಾಗೂ ಮಧುಗಿರಿಯ ಸುತ್ತಮುತ್ತ ಚಿತ್ರಿಕರಣವಾಗಿದೆ. ಮೊದಲ ಹಂತದ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.

ಈ ಚಿತ್ರಕ್ಕೆ ನಾಗರಾಜ್ ಛಾಯಾಗ್ರಹಣ, ಶ್ಯಾಮ್ ಸಂಗೀತವಿದ್ದು, ಸಂಭಾಷಣೆ ಹಾಗೂ ಸಾಹಿತ್ಯವನ್ನು  ನೆಲ್ಲಿಕಟ್ಟೆ ಸಿದ್ದೇಶ್ ಹಾಗೂ ಶ್ರೀ ಜೊತೆಯಾಗಿ ರಚಿಸಿದ್ದಾರೆ.

ಇದನ್ನೂ ಓದಿ:-


ಓದು ಮುಂದುವರೆಸಿ ಇಲ್ಲಿ…..

  1. Покуреха порошки безвкусные (на язык), остальные горькие. Так проще всего определить. https://www.band.us/page/99926443/ уже ожидается что нибудь?

  1. Покуреха порошки безвкусные (на язык), остальные горькие. Так проще всего определить. https://www.band.us/page/99926443/ уже ожидается что нибудь?

One thought on “‘ಸಾಲುಮರದ ತಿಮ್ಮಕ್ಕ’ನ ಪಾತ್ರದಲ್ಲಿ ನಟಿ Soujanya…

Leave a Reply

Your email address will not be published. Required fields are marked *

ಪುನಃ ಪುನಃ ನೋಡಿದರು,,,,ಎಂದ ಹಾಗೆ ವಿಭಿನ್ನ Lookನಲ್ಲಿ ರಮೇಶ್‌ ಅರವಿಂದ್‌ ಶಿವರಾಜ್‍ಕುಮಾರ್ ಹೊಸ ಚಿತ್ರ ‘ಡ್ಯಾಡ್‍’; ಡಾಕ್ಟರ್ ಪಾತ್ರದಲ್ಲಿ ನಟನೆ ಸುಳ್ಳು ಸುದ್ದಿ ನಿಜವಾಗುವ ಕಾಲ ಬಂದೇ ಬಡ್ತಾ..! ಯುವ ರಾಜ್‌ಕುಮಾರ್‌ ಜೊತೆ ಎಕ್ಕದಲ್ಲಿ ಸಂಜನಾ ಆನಂದ್‌ ರಾಧಿಕಾ ನಾರಾಯಣ್ ಅಭಿನಯಿಸಿದ ಕನ್ನಡ ಚಲನಚಿತ್ರ “ರಂಗಿತರಂಗ” ಮತ್ತೆ ಬೆಳ್ಳಿತೆರೆಗೆ