Yuva Rajkumar; ಯುವ ಹೊಸ ಚಿತ್ರಕ್ಕೆ ಸೂರಿ ನಿರ್ದೇಶನ; ‘ದುನಿಯಾ’ ವಿಜಯ್ ಪುತ್ರಿ ನಾಯಕಿ

ಯುವ ರಾಜಕುಮಾರ್ (Yuva Rajkumar) ಅಭಿನಯದಲ್ಲಿ ‘ದುನಿಯಾ’ (Duniya) ಸೂರಿ ಒಂದು ಚಿತ್ರವನ್ನು ನಿರ್ದೇಶಿಸುತ್ತಾರೆ ಎಂಬ ಸುದ್ದಿ ಇದ್ದೇ ಇತ್ತು. ಈ ಚಿತ್ರ ಯಾವಾಗ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ಇರಲಿಲ್ಲ. ಈಗ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.
ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್ 06ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲೇ ಹೊಸ ಚಿತ್ರ ಪ್ರಾರಂಭವಾಗಲಿದ್ದು, ವಿಶೇಷವೆಂದರೆ ಆ ಚಿತ್ರವನ್ನು ನಿರ್ಮಿಸಿದ್ದ ಅಶ್ವಿನಿ ಪುನೀತ್ ರಾಜಕುಮಾರ್, ಕಾರ್ತಿಕ್ ಗೌಡ, ಯೋಗಿ ಜಿ. ರಾಜ್, ಜಯಣ್ಣ ಮತ್ತು ಭೋಗೇಂದ್ರ ಈ ಚಿತ್ರವನ್ನು ಜೊತೆಯಾಗಿ ನಿರ್ಮಿಸುತ್ತಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರ ಅಕ್ಷಯ ತೃತೀಯ ದಿನ ಅಧಿಕೃತವಾಗಿ ಸೆಟ್ಟೇರಿದೆ. ಬುಧವಾರ, ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ‘ದುನಿಯಾ’ ವಿಜಯ್ ಕ್ಲ್ಯಾಪ್ ಮಾಡಿದ್ದು, ಪುನೀತ್ ರಾಜಕುಮಾರ್ ಅವರ ಮಗಳು ಧೃತಿ ಪುನೀತ್ ರಾಜಮಾರ್ ಕ್ಯಾಮೆರಾ ಚಾಲನೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.
‘ಬ್ಯಾಡ್ ಮ್ಯಾನರ್ಸ್’ ನಂತರ ಯಾವೊಂದು ಚಿತ್ರ ನಿರ್ದೇಶಿಸದ ಸೂರಿ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ದುನಿಯಾ’ ಚಿತ್ರದ ಮೂಲಕ ವಿಜಯ್ ಅವರನ್ನು ಹೀರೋ ಮಾಡಿದ್ದ ಸೂರಿ, ಈ ಚಿತ್ರದಲ್ಲಿ ವಿಜಯ್ ಅವರ ಮಗಳು ರಿತನ್ಯಾಳನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.
ಈ ಚಿತ್ರಕ್ಕೆ ದೀಪು ಎಸ್. ಕುಮಾರ್ ಸಂಕಲನ, ಚರಣ್ ರಾಜ್ ಸಂಗೀತ ನಿರ್ದೇಶನ, ಶೇಖರ್ ಛಾಯಾಗ್ರಹಣವಿರಲಿದೆ. ಮೇ ತಿಂಗಳ ಕೊನೆಯಲ್ಲಿ ಈ ಚಿತ್ರದ ಚಿತ್ರೀಕರಣ ಅಧಿಕೃತವಾಗಿ ಪ್ರಾರಂಭವಾಗಲಿದೆ.

ಇದನ್ನೂ ಓದಿ:-
ಹೆಚ್ಚಿನ ಓದಿ:-
[…] Jungle Mangal; ಅರಣ್ಯದಲ್ಲಿ ಬಂಧಿಯಾದ Yash Shetty […]
[…] […]
[…] […]
[…] Ramayana Rocking Star Yash ಫಸ್ಟ್ ಲುಕ್ […]
[…] Ramayana Rocking Star Yash ಫಸ್ಟ್ ಲುಕ್ […]
One thought on “Yuva Rajkumar; ಯುವ ಹೊಸ ಚಿತ್ರಕ್ಕೆ ಸೂರಿ ನಿರ್ದೇಶನ; ‘ದುನಿಯಾ’ ವಿಜಯ್ ಪುತ್ರಿ ನಾಯಕಿ”